ಡಿ. ಕೆ. ಶಿವಕುಮಾರ್ ರನ್ನು ಮತ್ತೆ 4 ದಿನಗಳ ಕಾಲ ಇ.ಡಿ. ವಶಕ್ಕೆ ನೀಡಿದ ನ್ಯಾಯಾಲಯ

0
20
delhi-court-extends-dk-shivakumars-ed-custody-to-4-days
Image Credit:google.com

ನವದೆಹಲಿ: ಡಿಕೆ ಶಿವಕುಮಾರ್ ಅವರ ನ್ಯಾಯಾಂಗ ಬಂದನದ ಅವಧಿ ಇಂದು ಮುಗಿದ ಹಿನ್ನೆಲೆಯಲ್ಲಿ ಕೋರ್ಟ್ ಗೆ ಹಾಜರುಪಡಿಸಲಾಯಿತು. ಇಡಿ ವಕೀಲರ ವಾದವನ್ನು ಪುರಸ್ಕರಿಸಿದ ನ್ಯಾಯಾಲಯ 4 ದಿನಗಳ ಕಾಲ ಜಾರಿನಿರ್ದೇಶನಾಲಯದ ವಶಕ್ಕೆ ನೀಡಿ ಆದೇಶ ಹೊರಡಿಸಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಭಂಧಿಸಿದಂತೆ ಡಿಕೆ ಶಿವಕುಮಾರ್ ಅವರು ಸರಿಯಾಗಿ ಮಾಹಿತಿ ನೀಡುತ್ತಿಲ್ಲ ಆದ್ದರಿಂದ ಇನ್ನೂ ಐದು ದಿನಗಳ ಕಾಲ ವಿಚಾರಣೆಗೆ ಅವಕಾಶ ಮಾಡಿಕೊಡಬೇಕೆಂದು ಇಡಿ ಪರ ವಕೀಲ ಕೆ ಎಂ ನಟರಾಜ್ ವಾದ ಮಂಡಿಸಿದರು. ಇದಕ್ಕೆ ಪ್ರತಿಯಾಗಿ ನ್ಯಾಯಾದೀಶರು, ಐದು ದಿನಗಳಲ್ಲಿ ಎಲ್ಲ ವಿಚಾರಣೆಗಳು ಮುಗಿದು ಹೋಗುತ್ತದೆಯೇ ಎಂದು ಪ್ರಶ್ನಿಸಿದರು. ಇನ್ನೂ ಕೆಲವು ದಾಖಲೆಗಳಿಗೆ ಸಂಬಂಧಿಸಿದಂತೆ ವಿಚಾರಣೆ ಮಾಡುವುದು ಬಾಕಿಯಿದೆ ಎಂದು ತಿಳಿಸಿದರು.

ಇದನ್ನೂ ಓದಿರಿ: ಭಾರತೀಯ ಸೇನಾಪಡೆಗೆ ಅತ್ಯಾಧುನಿಕ 8 ಅಪಾಚೆ ಹೆಲಿಕಾಪ್ಟರ್ ಸೇರ್ಪಡೆ

ಇದಕ್ಕೆ ಪ್ರತಿಯಾಗಿ ಡಿಕೆ ಶಿವಕುಮಾರ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ, ಅಧಿಕಾರಿಗಳು ಈಗಾಗಲೇ 100 ಗಂಟೆಗಳಿಗೂ ಅಧಿಕ ಸಮಯ ಡಿಕೆ ಶಿವಕುಮಾರ್  ಅವರನ್ನು ವಿಚಾರಣೆ ನಡೆಸಿದ್ದಾರೆ. ಈಗಾಗಲೇ ಅವರ ಆರೋಗ್ಯದ ಸ್ಥಿತಿ ತೀವ್ರ ಹದಗೆಟ್ಟಿದೆ ಈ ಕಾರಣಗಳಿಂದ ಅವರಿಗೆ ಜಾಮೀನು ಮಂಜೂರು ಮಾಡಬೇಕೆಂದು ಕೇಳಿಕೊಂಡರು.

ಸಂಪೂರ್ಣ ವಾದ-ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶರು ಡಿಕೆ ಶಿವಕುಮಾರ್ ಅವರನ್ನು 4 ದಿನಗಳ ಕಾಲ ಅಂದರೆ ಸೆಪ್ಟೆಂಬರ್ 17 ರ ವರೆಗೆ ಜಾರಿನಿರ್ದೇಶನಾಲಯದ ವಶಕ್ಕೆ ನೀಡಿ ಆದೇಶ ಹೊರಡಿಸಿದರು.

LEAVE A REPLY

Please enter your comment!
Please enter your name here